ಜಗಳೂರು: ಮಾಚಿಕೆರೆ ಗ್ರಾಮದಲ್ಲಿ ಬಸವೇಶ್ವರ ಸ್ವಾಮಿ ರಥೋತ್ಸವ
ಜಗಳೂರು ವಿಧಾನಸಭಾ ಕ್ಷೇತ್ರದ ಮೂಡಲ ಮಾಚಿಕೆರೆ ಗ್ರಾಮದಲ್ಲಿ ಬಸವೇಶ್ವರ ಸ್ವಾಮಿ ರಥೋತ್ಸವ ಗುರುವಾರ ಜರುಗಿತು. ಗ್ರಾಮದ ದೇವಸ್ಥಾನಕ್ಕೆ ಬಣ್ಣ ಬಣ್ಣದ ವಿದ್ಯುತ್ ದೀಪಾಲಂಕಾರಗಳಿಂದ ಅಲಂಕರಿಸಲಾಗಿತ್ತು. ಬಸವೇಶ್ವರ ಸ್ವಾಮಿ ರಥೋತ್ಸವದ ಹಿನ್ನೆಲೆ ವಿಶೇಷ ಪೂಜೆ ನೆರವೇರಿಸಿದರು. ಇದೇ ವೇಳೆ ಕೆಪಿಸಿಸಿ ಎಸ್ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ ಕೀರ್ತಿಕುಮಾರ್ ಭೇಟಿ ನೀಡಿ, ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮದ ಮುಖಂಡರು ಇದ್ದರು.