ಹೊಳಲ್ಕೆರೆ:-ತಾಲೂಕಿನ ಕೆಂಗುಂಟೆ ಗ್ರಾಮದಲ್ಲಿ ಬುಧವಾರ ಮಧ್ಯಾಹ 12:30ಕ್ಕೆ ಮಹಾದೇವಿ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು, ಜಾತ್ರೆ ಆಚರಣೆಯ ಕುರಿತಂತೆ ನೆರೆದಿದ್ದ ಭಕ್ತರಿಗೆ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಹಳಲ್ಕೆರೆ ಶಾಸಕರಾದ ಚಂದ್ರಪ್ಪ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಕಾರಜೋಳ ಸೇರಿದಂತೆ ಹಲವರಿದ್ದರು.