ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ನಿರ್ಮಾಣಕ್ಕಾಗಿ ಒಂದು ದಿನದ ಹಗಲು ರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು. ಕಲ್ಯಾಣ ಕರ್ನಾಟಕಕ್ಕೆ 371 ಜೆ ಜಾರಿಗೆ ತಂದರು ಸಹ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಸಾಧನೆವಾಗುತ್ತಿಲ್ಲ. ರಾಜ್ಯ ಸರ್ಕಾರದ ನಿರ್ಲಕ್ಷ ಇದಕ್ಕೆ ಕಾರಣವಾಗಿದ್ದು ಕೂಡಲೇ ಪ್ರತ್ಯೇಕ ರಾಜ್ಯ ನೀಡಬೇಕೆಂದು ಆಗ್ರಹಿಸಲಾಯಿತು. ಶುಕ್ರವಾರ ರಾತ್ರಿ 11 ಗಂಟೆಗೆ ಧರಣಿ ಸತ್ಯಾಗ್ರಹ ಮುಂದುವರೆದಿತ್ತು.