ಹುಬ್ಬಳ್ಳಿ ನಗರ: ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದ ಪ್ರಯಾಣಿಕ:ಹುಬ್ಬಳ್ಳಿ ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಹುಬ್ಬಳ್ಳಿ: ವಿಮಾನದ ತುರ್ತು ನಿರ್ಗಮನ ಬಾಗಿಲನ್ನು ಪ್ರಯಾಣಿಕನೊಬ್ಬ ತೆರೆದು ಸಹ ಪ್ರಯಾಣಿಕರು ಆತಂಕಗೊಳ್ಳುವಂತೆ ಮಾಡಿದ ಪ್ರಸಂಗ ನಡೆದಿದೆ.ಶುಕ್ರವಾರ ಸಂಜೆ ಇಲ್ಲಿನ ವಿಮಾನ ನಿಲ್ದಾಣದ ಅಪ್ರೊನ್ ರ್ಯಾಂಪ್ ಬೇನಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿಯ ಶಹಾಪುರದ ನಿರಂಜನ ಎಂಬ ಪ್ರಯಾಣಿಕನೇ ವಿಮಾನದ ತುರ್ತು ನಿರ್ಗಮನ ಬಾಗಿಲು ತೆರದು ಆತಂಕ ಸೃಷ್ಟಿ ಮಾಡಿದಾತನಾಗಿದ್ದಾನೆ. ನಿರಂಜನ ಹುಬ್ಬಳ್ಳಿಯಿಂದ ಪುಣೆಗೆ ಹೊರಟಿದ್ದ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದಲ್ಲಿ ತಮ್ಮ ಆಸನ ಪಕ್ಕದಲ್ಲಿದ್ದ ತುರ್ತು ನಿರ್ಗಮನ ಬಾಗಿಲನ್ನು ತೆರೆದಿದ್ದಾರೆ. ಇದರಿಂದ ಸಹ ಪ್ರಯಾಣಿಕರು ಕೆಲಕಾಲ ಆತಂಕಗೊಳ್ಳುವಂತಾಗಿತ್ತು ಎಂದು ವಿಮಾನ ನಿಲ್ದಾಣ ಸಿಬ್ಬಂದಿ ದೂರು ಕೊಟ್ಟಿದ್ದಾರೆ. ಈ ಕುರಿತಂತೆ ಗೋಕುಲ ರೋಡ್ ಠಾ