ಗದಗ: ಅಭಿವೃದ್ಧಿಗೆ ಪೂರಕವಾದ ಯೋಜನೆ : ನಗರದಲ್ಲಿ ಸಚಿವ ರಹೀಂ ಖಾನ್
Gadag, Gadag | Jun 3, 2025 ಗದಗ-ಬೆಟಗೇರಿ ವ್ಯಾಪಾರ,ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ ಹಾಗೂ ಪ್ರಾಧಿಕಾರದ ಅಭಿವೃದ್ಧಿಯ ಪರಿಕಲ್ಪನೆಯ ಅನಾವರಣವು ಒಂದು ಅದ್ಬುತ ಕಾರ್ಯಕ್ರಮವಾಗಿದೆ. ಈ ಯೋಜನೆಯು ಅಭಿವೃದ್ಧಿಗೆ ಪೂರಕವಾದಂತಹ ಯೋಜನೆಯಾಗಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ ಅವರು ನುಡಿದರು. ನಗರದ ಪಂಡಿತ ಡಾ.ಭೀಮಸೇನ ಜೋಶಿ ರಂಗಮಂದಿರದಲ್ಲಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೆಶನಾಲಯ, ಜಿಲ್ಲಾಡಳಿತ ಗದಗ, ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರದ ವತಿಯಿಂದ ಮಂಗಳವಾರ ಜರುಗಿದ ಗದಗ-ಬೆಟಗೇರಿ ವ್ಯಾಪಾರ,ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರದ ಉದ್ಘಾಟನೆ ಹಾಗೂ ಪ್ರಾಧಿಕಾರದ ಅಭಿವೃದ್ಧಿಯ ಪರಿಕಲ್ಪನೆಯ ಅನಾವರಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದ