ರಾಯಚೂರು ಜಿಲ್ಲೆಯ ಸಣ್ಣ, ಸೂಕ್ಷ್ಮ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಹಾಗೂ ಹೊಸ ಉದ್ಯಮಶೀಲರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಯಚೂರಿನ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಬೆಂಗಳೂರಿನ ಭಾರತೀಯ ರಫ್ತು ಉತ್ತೇಜನ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಕೈಗಾರಿಕೋದ್ಯಮಿಗಳಿಗೆ ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವು ನಗರದ ಹೈದ್ರಾಬಾದ್ ರಸ್ತೆಯ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಶನಿವಾರ 11 ಗಂಟೆಗೆ ನಡೆಯಿತು. ಬೆಂಗಳೂರಿನ ಫಿವೋ ಉಪ ನಿರ್ದೇಶಕರಾದ ಧನೀಶಾ ಮೀನು ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಜಿಲ್ಲೆಯ ಸಣ್ಣ, ಸೂಕ್ಷ್ಮ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಹಾಗೂ ಹೊಸ ಉದ್ಯಮಶೀಲರನ್ನು ಪ್ರೋತ್ಸಾಹಿಸುವ ವಿಷಯಗಳು ಮತ್ತು ರಫ್ತು ವ್ಯಾಪಾರದ ಟ