ಆನೇಕಲ್: ಬನ್ನೇರುಘಟ್ಟ ಸಮೀಪದ ಇಂಗ್ಲಿಷ್ ಕೌಂಟಿ ಬಡಾವಣೆಯಲ್ಲಿ ನೂತನವಾಗಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಕೃಷ್ಣಪ್ಪ
ಬೆಂ. ದಕ್ಷಿಣ ವ್ಯಾಪ್ತಿಯ ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಗ್ಲಿಷ್ ಕೌಂಟಿ ಬಡಾವಣೆಯಲ್ಲಿ ನೂತನವಾಗಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶಾಸಕ ಕೃಷ್ಣಪ್ಪ ಹಾಗೂ ಬಡಾವಣೆ ನಿವಾಸಿಗಳು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಇತ್ತೀಚಿಗೆ ಬಡಾವಣಿಯಲ್ಲಿ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿತ್ತು. ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಇಂದು ಶಾಸಕರು ಚಾಲನೆ ನೀಡಿದ್ದಾರೆ