ದೊಡ್ಡಬಳ್ಳಾಪುರ: ಹೊಸಹಳ್ಳಿ ಬಳಿ ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಬಳಿ ಅಕ್ರಮವಾಗಿ ಕಸಾಯಿ ಖಾನೆಗೆ ಗೋವುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ಅನ್ನು ತಡೆದು ಹೊಸಹಳ್ಳಿ ಪೊಲೀಸ್ ಠಾಣೆಗೆ ಗ್ರಾಮಸ್ಥರು ನೀಡಿದ್ದಾರೆ ಈ ವೇಳೆ ಕ್ಯಾಂಟರ್ ನಲ್ಲಿದ್ದ ವ್ಯಕ್ತಿ ಪರಾರಿಯಾಗಿದ್ದು ಚಾಲಕ ಸಿಕ್ಕಿಬಿದ್ದಿದ್ದಾನೆ ಗೌರಿಬಿದನೂರು ತಾಲೂಕಿನ ಅಲ್ಲಿಪುರ ಮೂಲಕ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಮಾರ್ಗವಾಗಿ ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸಲಾಗುತ್ತಿದ್ದು ಎಂದು ಚಾಲಕ ತಿಳಿಸಿದ್ದಾನೆ