ರೌಡಿಶೀಟರ್ ಗಳ ಜೊತೆಗೆ ಧಾರವಾಡ ಉಪ ನಗರ ಪೊಲೀಸ್ ಠಾಣೆಯ ಪಿಎಸ್ಐ ರುದ್ರಪ್ಪ ಗಡದಾರಿ ಹುಟ್ಟು ಹಬ್ಬ ಆಚರಿಸಿಕೊಂಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜಿಲ್ಲೆಯಿಂದ ಗಡಿಪಾರು ಆಗಿದ್ದ ರೌಡಿಶೀಟರ್ ಸುನೀಲ್ ಮಾಳಗಿ ಹಾಗೂ ಕಾರ್ತಿಕ್ ಬಡಿಗೇರ ಅವರೊಂದಿಗೆ ಜನ್ಮದಿನ ಆಚರಿಸಿಕೊಂಡಿದ್ದಾರೆ. ಕೋರ್ಟ್ ನಿಂದ ತಡೆಯಾಜ್ಞೆ ತಂದು ಧಾರವಾಡ ಜಿಲ್ಲೆಗೆ ಪ್ರವೇಶ ಪಡೆದಿದ್ದಾರೆ.