ಮಂಗಳೂರು: ಕುಂಬಳೆಯಲ್ಲಿ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿಯ ಬಂಧನ
ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಕಾಸರಗೋಡು ಕುಂಬಳೆಯ ಹನೀಫ್ ಎಂದು ಗುರುತಿಸಲಾಗಿದೆ.ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಕ್ರ: 135/2016 ಕಲಂ 323 324,354& 149 ಐಪಿಸಿ ಪ್ರಕರಣದಲ್ಲಿ ಮಂಗಳೂರಿನ 6ನೇ ಜೆಎಂಎಫ್ ಸಿ ನ್ಯಾಯಾಲಯದ ಸಿ ಸಿ ನಂಬರ್ 1059/2018 ರಂತೆ ವಿಚಾರಣೆಯಲ್ಲಿರುವ ಪ್ರಕರಣದಲ್ಲಿ ನ್ಯಾಯಾಲಯವು ಕಳೆದ ಒಂದು ವರ್ಷದಿಂದ 9 ಬಾರಿ ವಾರೆಂಟ್ ಹೊರಡಿಸಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.