ಶಿವಮೊಗ್ಗ: ರಾಮಾಯಣ ಗ್ರಂಥದ ಮೂಲಕ ಮಹರ್ಷಿ ವಾಲ್ಮೀಕಿ ನೀಡಿದ ಕೊಡುಗೆ ಅನನ್ಯ : ಶಿವಮೊಗ್ಗದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ
ಮಹರ್ಷಿ ವಾಲ್ಮೀಕಿ ಜಯಂತಿ ಶಿವಮೊಗ್ಗ ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಆಚರಿಸಲಾಯ್ತು. ಈ ವೇಳೆ ಶಾಸಕ ಚನ್ನಬಸಪ್ಪ ಭಾಗಿಯಾಗಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು ರಾಮಾಯಣ ಗ್ರಂಥ ದ ಮೂಲಕ ಮಹರ್ಷಿ ವಾಲ್ಮೀಕಿ ನೀಡಿದ ಕೊಡುಗೆ ಅನನ್ಯ ಎಂದರು. ಆದಿಕವಿ ಮಹರ್ಷಿ ವಾಲ್ಮೀಕಿಗಳು, ವಿಶ್ವಕವಿಯಾಗಿ, ಇತಿಹಾಸಕಾರರಾಗಿ, ದಾರ್ಶನಿಕರಾಗಿ, ಶಾಸ್ತ್ರಜ್ಞರಾಗಿ ಮತ್ತು ತತ್ವಜ್ಞಾನಿಯಾಗಿ ಸರ್ವಕಾಲಕ್ಕೂ ಗೌರವಿಸಲ್ಪಡುತ್ತಾರೆ ಎಂದರು ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸೇರಿ ಹಲವರು ಉಪಸ್ಥಿತರಿದ್ದರು