ಮಳವಳ್ಳಿ: ಶಾಸ್ತ್ರ ಹೇಳುವ ನೆಪದಲ್ಲಿ ವೃದ್ದೆಯೊಬ್ಬರ ವಂಚಿಸಿ ಒಡವೆಗಳ ಅಪಹರಣ, ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ನಡೆದ ಘಟನೆ
ಮಳವಳ್ಳಿ: ಬುಡಬುಡಿಕೆಯ ವೇಷದಾರಿರೊಬ್ಬ ಶಾಸ್ತ್ರ ಹೇಳುವ ನೆಪದಲ್ಲಿ ವೃದ್ಧೆಯೊಬ್ಬರ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ಭಾನುವಾರ ನಡೆದಿದೆ. ಈ ಗ್ರಾಮದ ಗುಜ್ಜಮ್ಮ ವಂಚನೆಗೆ ಒಳಗಾದ ವೃದ್ಧೆಯಾಗಿದ್ದು ಭಾನುವಾರ ಬೆಳಿಗ್ಗೆ ಬುಡಬುಡಿಕೆ ವೇಷದಾರಿರೊಬ್ಬ ಗುಜ್ಜಮ್ಮ ಅವರ ಮನೆಗೆ ಬಳಿ ಬಂದು ನಿಮ್ಮ ಮಗನಿಗೆ ತೊಂದರೆಯಾಗಲಿದೆ. ಅದನ್ನು ತಪ್ಪಿಸಲು ಕುಡಿಕೆ ಮಾಡಿಕೊಡುವುದಾಗಿ ಹೇಳಿ ಕುಡಿಕೆಯೊಳಗೆ ಚಿನ್ನಾಭರಣ ಹಾಕುವಂತೆ ಹೇಳಿದ್ದು ಗುಜ್ಜಮ್ಮ ತಮ್ಮಲ್ಲಿದ್ದ 12 ಚಿನ್ನದ ಕಾಸು ಹಾಗೂ ಗುಂಡುಗಳನ್ನು ಕೊಟ್ಟಿದ್ದಾರೆ. ನಂತರ ಪೂಜೆ ಮಾಡಿ ದುಷ್ಕರ್ಮಿ ಸಂಜೆ ನಂತರ ಚಿನ್ನಾಭರಣ ತೆಗೆದುಕೊಳ್ಳುವಂತೆ ಹೇಳಿ ಅಲ್ಲಿಂದ ತೆರಳಿದ್ದಾನೆ.