ಬಂಟ್ವಾಳ: ಮಂಕುಡೆ ಸಾರ್ವಜನಿಕ ಗಣೇಶೋತ್ಸವದ ಸುವರ್ಣ ಮಹೋತ್ಸವ: ಭಕ್ತರಿಗೆ ಆಶೀರ್ವಚನ ನೀಡಿದ ಸ್ವಾಮೀಜಿ
ಕೊಳ್ನಾಡು ಗ್ರಾಮದ ಮಂಕುಡೆಯಲ್ಲಿ ಸಾರ್ವಜನಿಕ ಗಣೇಶೋತ್ಸವದ 50ನೇ ವರ್ಷಾಚರಣೆಯ ಸುವರ್ಣ ಮಹೋತ್ಸವ ಸಂಭ್ರಮದಿಂದ ನಡೆಯಿತು. ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು. ಗಣಪತಿ ಹವನ, ಪ್ರತಿಷ್ಠೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಈ ವಿಶೇಷ ಸಮಾರಂಭ ಸಂಪನ್ನಗೊಂಡಿತು.