ಮುಂಬರುವ ಕೇರಳ ವಿಧಾನಸಭಾ ಚುನಾವನಣೆಯಲ್ಲಿ ಸೋಲುವ ಭೀತಿಯಿಂದ ಕೇರಳ ಸಿಎಂ ಅವರು ಕೋಗಿಲು ಬಡಾವಣೆಯಲ್ಲಿನ ಅಕ್ರಮ ಒತ್ತುವರಿ ತೆರವು ವಿಚಾರದಲ್ಲಿ ಕುತಂತ್ರ ರಾಜಕೀಯ ಮಾಡುತ್ತಿದ್ದಾರೆ " ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ಯಲಹಂಕದ ಕೋಗಿಲು ಬಳಿ ಘನ ತ್ಯಾಜ್ಯ ವಿಲೇವಾರಿ ಘಟಕದ ಸರ್ಕಾರಿ ಜಾಗದಲ್ಲಿ ಅನಧಿಕೃತ ನಿರ್ಮಾಣಗಳ ತೆರವು ಜಾಗವನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಪರಿಶೀಲಿಸಿ ನಂತರ ಮಾಧ್ಯಮಗಳ ಜತೆ ಮಾತನಾಡಿ, "ಕೋಗಿಲು ಬಡಾವಣೆಯಲ್ಲಿರುವ ಕ್ವಾರಿ ಜಾಗವನ್ನು ಘನತ್ಯಾಜ್ಯ ವಿಲೇವಾರಿ ಮಾಡಲು ಸರ್ಕಾರ ಒಂಬತ್ತು ವರ್ಷಗಳ ಹಿಂದೆಯೇ ನೀಡಿತ್ತು.