ಕೆ.ಜಿ.ಎಫ್: ಕೆ.ಜಿ.ಎಫ್ ನಗರದ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ
ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಕೋಲಾರ ಚಿನ್ನದ ಗಣಿ ಪ್ರದೇಶದ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಮಂಗಳವಾರದಂದು ಬೆಳಿಗ್ಗೆ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಎಸ್ಪಿ ಶಿವಾಂಶು ರಜಪೂತ್ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಅವರು ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ನಂತರ ಮಾತನಾಡಿ, ಮಹರ್ಷಿ ವಾಲ್ಮೀಕಿ ರಾಮಾಯಣದಲ್ಲಿ ಬರೆದಿರುವ ಮೌಲ್ಯಗಳನ್ನ ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕೆಂದರು. ಭಾರತೀಯ ಸಂಸ್ಕೃತಿಯನ್ನ ಇಂದಿಗೂ ಉಳಿಸಿ ವಿಶ್ವಕ್ಕೆ ಮಾನವೀಯ ಮೌಲ್ಯಗಳನ್ನ ಸಾರಿದ ಮಹಾನ್ಚೇತನ ವಾಲ್ಮೀಕಿ ಮಹರ್ಷಿಗ