ದಾಂಡೇಲಿ : ನಗರದ ಟಿಂಬರ್ ಡಿಪೋ ಆವರಣದಲ್ಲಿರುವ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ 32ನೇ ವಾರ್ಷಿಕ ವರ್ಧಂತಿ ಉತ್ಸವವು ಸಂಭ್ರಮ, ಸಡಗರ ಹಾಗೂ ಶ್ರದ್ಧಾಭಕ್ತಿಯಿಂದ ಇಂದು ಗುರುವಾರ ಜರುಗಿತು. ಬೆಳಿಗ್ಗೆಯಿಂದಲೇ ಶ್ರೀ ಸ್ವಾಮಿ ಸನ್ನಿಧಿಯಲ್ಲಿ ವಿವಿಧ ಪೂಜಾರಾಧನೆಗಳಾದ ಗಣಹೋಮ, ಮಹಾಪೂಜೆ, ಮಹಾ ಮಂಗಳಾರತಿ ಜರುಗಿತು. ಮಧ್ಯಾಹ್ನ 12.30 ಗಂಟೆಯಿಂದ ಶ್ರೀ ಸ್ವಾಮಿಯ ಮಹಾಪ್ರಸಾದ ವಿತರಣೆ ನಡೆಯಿತು. ವಾರ್ಷಿಕ ವರ್ಧಂತಿ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿದ್ದರು. ಅರಣ್ಯ ಇಲಾಖೆಯ ಹಿರಿಯ, ಕಿರಿಯ ಅಧಿಕಾರಿಗಳು, ಸಿಬ್ಬಂದಿಗಳು ವರ್ಧಂತಿ ಉತ್ಸವದಲ್ಲಿ ಭಾಗವಹಿಸಿದ್ದರು.