ಶಿಕ್ಷಕರು ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಬೇಕು. ತನ್ಮೂಲಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕು ಎಂದು ಬಿಇಓ ವೆಂಕಟೇಶ್ ಗುಡಾಳ್ ಅವರು ಸಲಹೆ ನೀಡಿದರು. ಪಟ್ಟಣದಲ್ಲಿ ಜಿಲ್ಲಾ ಪಂಚಾಯತ್ ಬೀದರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶಿಕ್ಷಕರ ಸಂಘದ ಸಂಯುಕ್ತ ಆಶಯದಲ್ಲಿ ಬುಧವಾರ ಮಧ್ಯಾಹ್ನ 1ಕ್ಕೆ ನಡೆದ ಗುರು ಸ್ಪಂದನ ಉದ್ಘಾಟಿಸಿ ಮಾರ್ಗದರ್ಶನ ನೀಡಿದರು. ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರ ಸಂಘದ ಪದಾಧಿಕಾರಿಗಳು ಸಭೆಲ್ಲಿದ್ದರು.