ಸಿದ್ಧಾಪುರ: ಪಟ್ಟಣದ ಶಂಕರ ಮಠದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರು ಗೌರವಾರ್ಪಣಾ ಸಮಾರಂಭ, ಶಾಸಕ ಭೀಮಣ್ಣ ನಾಯಕ್ ಭಾಗಿ
ಸಿದ್ದಾಪುರ :ಪಟ್ಟಣದ ಶಂಕರ ಮಠದಲ್ಲಿ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಗುರು ಗೌರವಾರ್ಪಣಾ ಸಮಾರಂಭವನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು. ಶಾಸಕ ಭೀಮಣ್ಣ ನಾಯ್ಕ ಸಮಾರಂಭದಲ್ಲಿ ಭಾಗವಹಿಸಿ ಸಮಾರಂಭದಲ್ಲಿ ನಿವೃತ್ತ ಶಿಕ್ಷಕರು, ತಾಲೂಕಾ ಹಾಗೂ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು, ಕ್ರೀಡೆ, ಸಾಂಸ್ಕೃತಿಕ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಶುಭ ಕೋರಿದರು.ಈ ಸಂದರ್ಭದಲ್ಲಿ ಸಿದ್ದಾಪುರ ಪಟ್ಟಣ ಪಂಚಾಯತ ಅಧ್ಯಕ್ಷೆ ಚಂದ್ರಕಲಾ ನಾಯ್ಕ,ಸ್ಥಾಯಿ ಸಮಿತಿ ಅಧ್ಯಕ್ಷ ಸುಧೀರ ನಾಯ್ಕ, ತಾಲೂಕಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ ಇದ್ದರು