ಹುಬ್ಬಳ್ಳಿ ನಗರ: ನಗರದಲ್ಲಿ ಸ್ವಚ್ಛ ಭಾರತ್ ಅಭಿಯಾನ ಕಾರ್ಯಕ್ರಮದಲ್ಲಿ ಭಾಗಿಯಾದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಇಂದು ಹುಬ್ಬಳ್ಳಿಯ ಶ್ರೀ ಸಿದ್ದಾರೂಡ ಸ್ವಾಮೀಜಿ ರೈಲ್ವೆ ನಿಲ್ದಾಣದದಲ್ಲಿ ನೈಋತ್ಯ ರೈಲ್ವೆ ವಲಯದವರು (SWR) ಆಯೋಜಿಸಿದ್ದ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸ್ವಚ್ಛತಾ ಹೀ ಸೇವಾ ಅಂಗವಾಗಿ ನಡೆಯುತ್ತಿರುವ ಸ್ವಚ್ಛ ಭಾರತ್ ಅಭಿಯಾನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರು ಭಾಗಿಯಾದರು.. ಈ ಸಂದರ್ಭದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ ಬಿಜೆಪಿಯ ಪದಾಧಿಕಾರಿಗಳು, ಪಾಲಿಕೆಯ ಸದಸ್ಯರು ಸೇರಿದಂತೆ ಉಪಸ್ಥಿತರಿದ್ದರು.