ಬೆಂಗಳೂರು ಉತ್ತರ: “ವಂದೇ ಮಾತರಂ 150ನೇ ವರ್ಷಾಚರಣೆ: ಮಾಳವಿಕಾ ಅವಿನಾಶ್ ಪೋಸ್ಟರ್ ಬಿಡುಗಡೆ”
ವಂದೇ ಮಾತರಂ 150ನೇ ವಾರ್ಷಿಕೋತ್ಸವದ ಅಂಗವಾಗಿ ನವೆಂಬರ್ 7ರಂದು ದೇಶದಾದ್ಯಂತ ನಡೆಯಲಿರುವ ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ ಮತ್ತು ಸಂಭ್ರಮಾಚರಣೆ ಕುರಿತು ಬುಧವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ವಂದೇ ಮಾತರಂ 150ನೇ ವಾರ್ಷಿಕೋತ್ಸವದ ರಾಜ್ಯ ಸಂಚಾಲಕರಾದ ಶ್ರೀಮತಿ ಮಾಳವಿಕಾ ಅವಿನಾಶ್ ಅವರು ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿದರು. ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು. ಸಿ. ಮಂಜುಳ ಹಾಗೂ ವಂದೇ ಮಾತರಂ 150ನೇ ವಾರ್ಷಿಕೋತ್ಸವದ ರಾಜ್ಯ ಸಹ-ಸಂಚಾಲಕರಾದ ಶ್ರೀಮತಿ ಶ್ಯಾಮಲ ಕುಂದರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.