ಡಿಸೆಂಬರ್ 21ರ ಭಾನುವಾರದಂದು ಶಿವಮೊಗ್ಗ ಜಿಲ್ಲೆಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಹುಟ್ಟಿದ ಮಕ್ಕಳಿನಿಂದ ಐದು ವರ್ಷದ ಒಳಗಿನ 1,45,255 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಇನ್ನ ಪೋಷಕರು ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಎಂದು ಶಿವಮೊಗ್ಗದ ಜಿಲ್ಲಾಧಿಕಾರಿಗಳು ಗುರುದತ್ತ ಹೆಗಡೆಯವರು ಶುಕ್ರವಾರ ಸಂಜೆ ಕರೆ ನೀಡಿದ್ದಾರೆ.