ಹೊಸನಗರ: ಕೊಡೂರು ಬಳಿ ಖಾಸಗಿ ಬಸ್ ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಓರ್ವ ಮಹಿಳೆ ಗಂಭೀರ
ಖಾಸಗಿ ಬಸ್ ಹಾಗೂ ಪೆಟ್ರೋಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಕೋಡೂರು ಪಟ್ಟಣದಲ್ಲಿ ಶನಿವಾರ ನಡೆದಿದೆ. ಗಜಾನನ ಬಸ್ ಹಾಗೂ ಪೆಟ್ರೋಲ್ ಟ್ಯಾಂಕ್ ನಡುವೆ ಅಪಘಾತ ಸಂಭವಿಸಿದ್ದು,ಬಸ್ನಲ್ಲಿದ್ದ ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮಹಿಳೆಯೊಬ್ಬರಿಗೆ ಗಂಭೀರವಾಗಿ ಪೆಟ್ಟು ಬಿದ್ದಿರುವ ಹಿನ್ನೆಲೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ರವಾನಿಸಿದ್ದಾರೆ ಹೊಸನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.