ಡಿ.15,ಸೋಮವಾರ ಮಧ್ಯಾಹ್ನ 12ಕ್ಕೆ ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ವತಿಯಿಂದ ‘ಎದ್ದೇಳು ಕನ್ನಡಿಗ – ಕೆಆರ್‌ಎಸ್ ಪಕ್ಷ ಸೇರು ಬಾ’ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ನಗರದ ಸೋಮಪ್ಪನ ಕೆರೆ ಆವರಣದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಜನಜಾಗೃತಿ ಮೂಡಿಸುವ ಜೊತೆಗೆ ಪಕ್ಷದ ಸದಸ್ಯತ್ವ ನೋಂದಣಿ ನಡೆಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆಆರ್‌ಎಸ್ ಪಕ್ಷದ ಜಿಲ್ಲಾಧ್ಯಕ್ಷರು, ಇತ್ತೀಚಿನ ದಿನಗಳಲ್ಲಿ ಕನ್ನಡಿಗರು ಅನುಭವಿಸುತ್ತಿರುವ ನೋವು, ಕಷ್ಟ–ಕಾರ್ಪಣ್ಯಗಳಿಗೆ ರಾಜ್ಯವನ್ನು ಆಳುತ್ತಿರುವ ಎಲ್ಲಾ ರಾಜಕೀಯ ಪಕ್ಷಗಳೇ ನೇರ ಕಾರಣವೆಂದು ಆರೋಪಿಸಿದರು. ತಮ್ಮ ಸ್ವಾರ್ಥ ಹಾಗ