ಹನೂರು : ಹನೂರು ವಿಧಾನಸಭಾ ಕ್ಷೇತ್ರ ಭೌಗೋಳಿಕವಾಗಿ ಬಹಳ ವಿಸ್ತೀರ್ಣವನ್ನು ಹೊಂದಿದ್ದು ಹೆಚ್ಚಿನ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಲು ಈಗಾಗಲೇ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್ ಸಿ ಮಹದೇವಪ್ಪ ಸಂಸದ ಸುನೀಲ್ ಬೋಸ್ ಸೂಚನೆ ನೀಡಿದ್ದೂ ಅದರಂತೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿದ್ದಾರೆ. ಹಾಗಾಗಿ ರೈತರು ಗೊಂದಲಕ್ಕೆ ಈಡಾಗುವುದು ಬೇಡ ಎಂದು ಕೆಪಿಸಿಸಿ ಜಿಲ್ಲಾ ವಕ್ತಾರ ಮಧುವನಹಳ್ಳಿ ಎಸ್. ಶಿವಕುಮಾರ್ ತಿಳಿಸಿದರು. ಬುಧವಾರದಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್, ಹಾಗೂ ಸಂಸದ ಸುನೀಲ್ ಬೋಸ್ ರವರು ಧರಣಿ ಸ್ಥಳಕ್ಕೆ ಬರಲಿಲ್ಲವೆಂಬ ಕಾರಣ ಒಡ್ಡಿ ಅವರನ್ನು ಹುಡುಕಿ ತರುವಂತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಬಾರದಾಗಿತ್ತು. ಎಂದರು