ಕೊಂಡಸಕೊಪ್ಪ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ದುರ್ಗಾದೇವಿ ಮಂದಿರ ಕಟ್ಟಡ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು. ಬೆಳಗಾವಿ ತಾಲೂಕಿನ ಕೊಂಡಸಕೊಪ್ಪ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ದುರ್ಗಾದೇವಿ ಮಂದಿರದ ಕಟ್ಟಡವನ್ನು ಶುಕ್ರವಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಉದ್ಘಾಟಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು. 45 ಲಕ್ಷ ರೂ,ಗಳ ವೆಚ್ಚದಲ್ಲಿ ದೇವಸ್ಥಾನ ನಿರ್ಮಾಣಗೊಂಡಿದೆ. ಈ ನೂತನ ದೇವಸ್ಥಾನ ಸಾಂಪ್ರದಾಯಿಕ ಶಿಲ್ಪಕಲೆ ಮತ್ತು ಆಧುನಿಕ ವಿನ್ಯಾಸದ ಸುಂದರ ಮಿಶ್ರಣವಾಗಿದ್ದು, ಇದು ಕೊಂಡಸಕೊಪ್ಪ ಗ್ರಾಮದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರವಾಗಿ ಕಂಗೊಳಿಸಲಿ ಎಂದರು