ಶಿವಮೊಗ್ಗ: ನಗರದಲ್ಲಿ ಆಶ್ರಯ ಸಮಿತಿ ಸಭೆಯಲ್ಲಿ ಭಾಗಿಯಾದ ಶಾಸಕ ಚನ್ನಬಸಪ್ಪ
ಶಿವಮೊಗ್ಗ ನಗರದಲ್ಲಿ ಸೋಮವಾರ ನಡೆದ ಆಶ್ರಯ ಸಮಿತಿ ಸಭೆಯಲ್ಲಿ ಶಾಸಕ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು. ಈ ಸಭೆಯಲ್ಲಿ ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯ ರಿವರ್ ಫ್ರಂಟ್ ಯೋಜನೆಗಾಗಿ ತಮ್ಮ ಜಾಗವನ್ನು ನೀಡಿದ ಮಂಡಕ್ಕಿ ಬಟ್ಟಿಯ ನಿವಾಸಿಗಳಿಗೆ ಪ್ರಧಾನಮಂತ್ರಿ ಆಶಾ ಆಶ್ರಯ ಯೋಜನೆ ಅಡಿಯಲ್ಲಿ ಶಿವಮೊಗ್ಗ ನಗರದ ಗೋವಿಂದಪುರ ಪ್ರತಿಶತದಲ್ಲಿ ನಿರ್ಮಾಣಗೊಂಡಿರುವ ಮನೆಗಳನ್ನು ಚೀಟಿ ಎತ್ತುವ ಮೂಲಕ ಒಟ್ಟು 58 ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು . ಈ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.