ಪ್ರತಿವರ್ಷ ಡಿಸೆಂಬರ್ ತಿಂಗಳಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಅದೇ ನಿಟ್ಟಿನಲ್ಲಿ ಶಿವಮೊಗ್ಗ ಸಂಚಾರ ಪೊಲೀಸ್ ಠಾಣೆ ವತಿಯಿಂದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶುಕ್ರವಾರ ಅಪರಾಧ ತಡೆ ಮಾಸಾಚರಣೆ-2025ರ ಅಂಗವಾಗಿ ಶಿವಮೊಗ್ಗ ನಗರದ ಡಿವಿಎಸ್ ಸರ್ಕಲ್ ನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ರೈಲ್ವೆ ಸ್ಟೇಷನ್ ನಲ್ಲಿ ಆಟೋ ಚಾಲಕರಿಗೆ ರಸ್ತೆ ಸಂಚಾರ ನಿಯಮಗಳ ಕುರಿತು ಅರಿವು ಮೂಡುಸಿದರು.