ಸತತವಾಗಿ ಎಂಟು (8) ಬಾರಿ ಪಶ್ಚಿಮ ಶಿಕ್ಷಕರ ಮತಕ್ಷೇತ್ರದಿಂದ ದಾಖಲೆಯ ಗೆಲುವು ಸಾಧಿಸಿ,45 ವರ್ಷಗಳ ಕಾಲ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿ ಪ್ರಸ್ತುತ ವಿಧಾನ ಪರಿಷತ್ ಸಭಾಪತಿಗಳಾಗಿರುವ ಬಸವರಾಜ ಹೊರಟ್ಟಿ ಅವರಿಗೆ ಗೌರವ ಸನ್ಮಾನ ಕಾರ್ಯಕ್ರಮವನ್ನು ನಾಳೆ ಶನಿವಾರ ಸಾಯಂಕಾಲ 4-00 ಗಂಟೆಗೆ ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಭರದ ಸಿದ್ದತೆ ನಡೆದಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವ ಸಂತೋಷ್ ಲಾಡ್ ಸೇರಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರು, ಶಾಸಕರು ಸೇರಿದಂತೆ ಮೊದಲಾದವರು ಭಾಗಿಯಾಗಲಿದ್ದಾರೆ.