ಹಳಿಯಾಳ : ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರನ್ನು ಹಳಿಯಾಳ ತಾಲೂಕಿನ ಮಾಜಿ ಜಿ.ಪಂ ಸದಸ್ಯ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಮತ್ತು ಕಾಂಗ್ರೆಸ್ ಮುಖಂಡರಾದ ಕೈತಾನ ಬಾರ್ಬೋಜ ಅವರು ಇಂದು ಗರುವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಬೆಂಗಳೂರಿನಲ್ಲಿ ಭೇಟಿಯಾದರು. ಈ ಭೇಟಿಯಲ್ಲಿ ಪ್ರಚಲಿತ ರಾಜಕೀಯ ಹಾಗೂ ಕ್ರೈಸ್ತ ಅಭಿವೃದ್ಧಿ ನಿಗಮದಿಂದ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ಸುಧೀರ್ಘ ಚರ್ಚೆ ನಡೆಯಿತು. ಮುಂಬರುವ ಚುನಾವಣೆಯಲ್ಲಿ ಸಮುದಾಯದವರಿಗೆ ಹೆಚ್ಚಿನ ಅವಕಾಶ ನೀಡಬೇಕೆಂಬ ಸಲ್ಲಿಸಿದ ಪ್ರಸ್ತಾವನೆಗೆ ಉಪ ಮುಖ್ಯಮಂತ್ರಿಯವರು ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿರುವುದಾಗಿ ಕೈತಾನ ಬಾರ್ಬೋಜ ಅವರು ತಿಳಿಸಿದ್ದಾರೆ.