ನಂಜನಗೂಡು: ನಗರದ ಸಾರ್ವಜನಿಕ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ತಾಲ್ಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ
ಮತದಾನದ ದಿನ ರಜೆ ದಿನ ಅಲ್ಲ. ಅಂದು ಪ್ರವಾಸವನ್ನು ಕೈಗೊಳ್ಳದೆ ಜವಾಬ್ದಾರಿಯುತ ನಾಗರಿಕರಾಗಿ ಸಂವಿಧಾನಿಕ ಹಕ್ಕನ್ನು ಚಲಾಯಿಸುವಂತೆ ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿ ಸಾರ್ವಜನಿಕರಿಗೆ ಅರಿವು ಮೂಡಿಸಿದೆ. ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ತಾಲ್ಲೂಕು ಪಂಚಾಯಿತಿ ಸ್ವೀಪ್ ಸಮಿತಿ ವತಿಯಿಂದ ನಿತ್ಯ ವಿನೂತನ ರೀತಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಅದೇ ರೀತಿ ಇಂದು ಸಾರ್ವಜನಿಕ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು.