ಭಟ್ಕಳ: ತಾಲೂಕಿನ ಸಾಗರ ರಸ್ತೆಯಲ್ಲಿ ಕಾಡು ಹಂದಿ ಅಡ್ಡ ಬಂದ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಆಟೋ ಚಾಲಕ, ಸೋನಾರಕೇರಿ ನಿವಾಸಿ ಶಶಿಕಾಂತ ಶೇಟ ಅವರಿಗೆ ತಲೆಭಾಗ ಹಾಗೂ ಎರಡೂ ಕಾಲುಗಳಲ್ಲಿ ಭಾರೀ ಮುರಿತ ಉಂಟಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ತಕ್ಷಣ ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಕುರಿತು ಗ್ರಾಮೀಣ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ