ಮದ್ದೂರು: ಭಾರತೀನಗರದ ಮದ್ದೂರು-ಮಳವಳ್ಳಿ ಹೆದ್ದಾರಿಯಲ್ಲಿ ಕಬ್ಬು ತುಂಬಿದ ಲಾರಿ ಪಲ್ಟಿ
Maddur, Mandya | Sep 19, 2025 ಭಾರತೀನಗರದ ಮದ್ದೂರು-ಮಳವಳ್ಳಿ ಹೆದ್ದಾರಿಯಲ್ಲಿ ಕಬ್ಬು ತುಂಬಿದ ಲಾರಿ ಮಗುಚಿ ಬಿದ್ದಿರುವ ಘಟನೆ ಜರುಗಿದೆ. ಮದ್ದೂರು ಸಮೀಪದ ಕೊಪ್ಪ ಎನ್ಎಸ್ಎಲ್ ಸಕ್ಕರೆ ಕಾರ್ಖಾನೆಗೆ ಕಬ್ಬು ತುಂಬಿಕೊAಡು ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಲಾರಿಯ ಚಾಲಕನ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಲಾರಿ ಮಗುಚಿ ಬಿದ್ದಿರುವುದರಿಂದ ರಸ್ತೆಯೆಲೆಲ್ಲ ಕಬ್ಬುಗಳು ಚೆಲ್ಲಾಪಿಲ್ಲಿಯಾಗಿದ್ದವು. ಇದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿತ್ತು. ಕೂಡಲೇ ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ರಸ್ತೆಯಲ್ಲಿ ಬಿದ್ದಿದ್ದ ಕಬ್ಬು ಹಾಗೂ ಲಾರಿಯನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.