ಶಿರಾ: NH-48ರಲ್ಲಿ ಭೀಕರ ಅಪಘಾತ; ಇಂಟರ್ವ್ಯೂಗಾಗಿ ಬೆಂಗಳೂರಿಗೆ ಹೋಗುತ್ತಿದ್ದ ಇಬ್ಬರು ಯುವತಿಯರು ಸಾವು
Sira, Tumakuru | Oct 26, 2026 ಶಿರಾ ತಾಲೂಕಿನ ತಾವರೆಕೆರೆ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಯುವತಿಯರು ಮೃತಪಟ್ಟಿದ್ದಾರೆ. ಬಿಜಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಡಿವೈಡರ್ ದಾಟಿ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.