ಸಿದ್ಧಾಪುರ: ಸಿದ್ದಾರಾಪುರ ಬಿಇಒ ಕಚೇರಿಯಲ್ಲಿ ಬೆಳಗಾವಿ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿ ಪೂರ್ವಭಾವಿ ಸಭೆ
ಸಿದ್ದಾಪುರ : ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಆಮಂತ್ರಣ ಪತ್ರಿಕೆಯನ್ನು ಸೋಮವಾರ ಬಿಡುಗಡೆ ಮಾಡಲಾಯಿತು. ಸಿದ್ದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಶಾದಕ ಭೀಮಣ್ಣ ನಾಯ್ಕ ಅವರು, ಪಂದ್ಯಾವಳಿಯ ಸಂಘಟನಾ ಪೂರ್ವ ಸಭೆಯಲ್ಲಿ ಆಮಂತ್ರಣ ಬಿಡುಗಡೆಗೊಳಿಸಿ ಮಾತನಾಡಿ, ನನ್ನ ಕ್ಷೇತ್ರದ ವ್ಯಾಪ್ತಿಯ ಸಿದ್ದಾಪುರದಲ್ಲಿ ಬೆಳಗಾವಿ ವಿಭಾಗಮಟ್ಟದ ವಾಲಿಬಾಲ್ ಪಂದ್ಯಾವಳಿ ಸಿದ್ದಾಪುರದಲ್ಲಿ ನಡೆಯುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ ಎಂದರು.