ಬೆಂಗಳೂರು ಉತ್ತರ: ಆ.18 ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ: ನಗರದಲ್ಲಿ ಸಿ.ಎಸ್ ಪಾಟೀಲ್
ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೋಮವಾರ (ಆ. 18) ಅತಿ ಭಾರಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಅವರು ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮೈಸೂರ್ ಬ್ಯಾಂಕ್ ಸರ್ಕಲ್ ಬಳಿ ಇರುವ ಹವಮಾನ ಕೇಂದ್ರದಲ್ಲಿ ಹವಮಾನ ಮುನ್ಸೂಚನೆ ನೀಡಿದರು. ಕರಾವಾಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು, ರಾಜ್ಯಾದ್ಯಂತ ಆಗಸ್ಟ್ 23ರವರೆಗೂ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ,