ಬೀಳಗಿ: ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ,ಪಟ್ಟಣದಲ್ಲಿ ತಹಶೀಲ್ದಾರ ಮೂಲಕ ಸರ್ಕಾರಕ್ಕೆ ಮನವಿ
Bilgi, Bagalkot | Sep 16, 2025 ಸತತವಾಗಿ ಸುರಿದ ಮಳೆಯಿಂದಾಗಿ ಅತಿವೃಷ್ಟಿ, ಅನಾವೃಷ್ಟಿಯಿಂದಾಗಿ ರೈತರು ಬೀಜ, ರಸಗೊಬ್ಬರ, ಕೀಟನಾಶಕ ಔಷದ, ಕಳೆ ತೆಗೆಯಲು ಕೃಷಿ ಕಾರ್ಮಿಕರಿಗೆ ಎಕರೆಗೆ ಈರುಳ್ಳಿ ಬೀಜ ಬಿತ್ತನೆಗೆ ಕನಿಷ್ಟ ನಾಲವತ್ತು ಸಾವಿರ ರೂಪಾಯಿಗಳು ಖುರ್ಚು ಮಾಡಿದ್ದು, ಆ ಬೆಳೆಗಳು ನೀರು ಪಾಲಾಗಿದ್ದು, ಕೈ ಗೆ ಬಂದ ತುತ್ತು ಬಾಯಿಗೆ ಬರದಂತಾಗಿ ರೈತನು ಕಷ್ಟದಲ್ಲಿ ಸಿಲುಕಿದ್ದು ಕೇಂದ್ರ ಹಾಗೂ ರಾಜ್ಯ ಸರಕಾರ ನ್ಯಾಯಯುತ ಪರಿಹಾರವನ್ನು ಶೀಘ್ರದಲ್ಲಿ ನೀಡಬೇಕೆಂದು ರೈತ ಲಕ್ಷ್ಮಣ ಆಗ್ರಹಪಡಿಸಿದರು. ಅವರು ಬೀಳಗಿ ಪಟ್ಟಣದಲ್ಲಿ ಭಾರತೀಯ ಕಿಸಾನ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತ ವತಿಯಿಂದ ಬೀಳಗಿ ತಹಶೀಲ್ದಾರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.