ಲಿಂಗಸೂರು: ಹಟ್ಟಿ : ಆರ್ ಎಸ್ ಎಸ್ ಪಥಸಂಚಲನದಲ್ಲಿ ಹಟ್ಟಿ ಚಿನ್ನದ ಗಣಿ ಸಿಬ್ಬಂದಿಗಳು ಭಾಗಿ
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಹಟ್ಟಿ ಚಿನ್ನದ ಗಣಿ ಸಿಬ್ಬಂದಿಗಳು ಇತ್ತೀಚಿಗೆ 100 ವರ್ಷದ ಸಂಭ್ರಮದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಸೋಮವಾರ ಬೆಳಿಗ್ಗೆ ಅಧಿಕಾರಿಗಳಿಗೆ ದೂರು ನೀಡಲಾಗಿದ್ದು, ಹಟ್ಟಿ ಚಿನ್ನದ ಗಣಿ ಕಂಪನಿಯ ಆಡಳಿತ ವಿಭಾಗದ ರಂಗನಾಥ ಮತ್ತು ಸಿದ್ದರಾಮ ಭಾಗವಹಿಸಿದ್ದರು ಎಂದು ಆರೋಪಿಸಲಾಗುತ್ತಿದೆ. ಸರ್ಕಾರದ ನಿಯಮಗಳ ಪ್ರಕಾರ ಸಿಬ್ಬಂದಿಗಳು ಖಾಸಗಿ ಸಂಘ ಸಂಸ್ಥೆಗಳ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ಇದೆ ನಿಯಮಗಳನ್ನು ಗಾಳಿಗೆ ತೋರಿ ಇವರು ಭಾಗವಹಿಸಿದ್ದು ಇವರ ವಿರುದ್ಧ ತನಿಖೆ ಮಾಡಿ ಕ್ರಮ ಕೈಗೊಳ್ಳಬೇಕು ಎಂಬ ಆರೋಪಗಳು ಕೇಳಿ ಬರುತ್ತಿವೆ.