ಬೆಳಗಾವಿ: ಪೊಲೀಸರ ಕಾರ್ಯ ನಿಜಕ್ಕೂ ಶ್ಲಾಘನೀಯ: ನಗರದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಪೊಲೀಸರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ಹಬ್ಬ ಹರಿ ದಿನಗಳನ್ನು ಆಚರಿಸುವಾಗ ಹಗಲಿರುಳು ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮಿಸುವ ಪೊಲೀಸ್ ಸೇವೆ ಅಪ್ರತಿಮ ಎಂದು ಶ್ಲಾಘಿಸಿದರು. ಬೆಳಗಾವಿ ನಗರ ಪೋಲೀಸ್ ಕಮಿಷನರೇಟ್ ಮತ್ತು ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಮಂಗಳವಾರ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಮಾತನಾಡಿದರು ಕಾನೂನು ಸುವ್ಯವಸ್ಥೆ ಕಾಪಾಡಲು ನಿರಂತರವಾಗಿ ಶ್ರಮಿಸುವ ಪೊಲೀಸರ ಕಾರ್ಯ ಶ್ಲಾಘನೀಯ ಎಂದು ಹೇಳಿದರು