ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಟಿ ಸೋಮಶೇಖರ್ ಅವರು ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಆಯುಕ್ತ ಡಾ ರಾಜೇಂದ್ರ ಕೆ.ವಿ ಹಾಗೂ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಸೂಕ್ತ ನಿರ್ದೇಶನಗಳನ್ನು ನೀಡಿದರು.ಸೆಪ್ಟೆಂಬರ್ 23ರಂದು ಸಂಜೆ 4 ಗಂಟೆಗೆ ನಡೆದ ಸಭೆಯಲ್ಲಿ ಭಾಗಿಯಾದ ಅವರು, ''ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಎಲ್ಲಾ ರಸ್ತೆ ಗುಂಡಿಗಳು ಹಾಗೂ ರಸ್ತೆ ಮೇಲ್ಮೈ ದುರಸ್ತಿ ಕಾರ್ಯವನ್ನು ತ್ವರಿತವಾಗಿ ಮುಚ್ಚಿ ವಾಹನ ಸವಾರರಿಗೆ ಅನುಕೂಲವಾಗುವಂತಹ ರಸ್ತೆ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದರು.