ಕಾಗವಾಡ: ದಲಿತಪರ ಸಂಘಟನೆಗಳಿಂದ ಪಟ್ಟಣದಲ್ಲಿ ಬೃಹತ ಪ್ರತಿಭಟನೆ
ಸೋಮವಾರ ದಿನಾಂಕ 13 ರಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೇರಿದ ದಲಿತ ಸಂಘಟನೆಯ ಮುಖಂಡರು, ಜಿಲ್ಲಾ ಸಂಚಾಲಕ ಸಂಜಯ ತಳವಳಕರ್ ನೇತೃತ್ವದಲ್ಲಿ ಮುಖ್ಯ ನ್ಯಾಯಾಧೀಶರಾದ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದ ವಕೀಲರಾದ ರಾಕೇಶ್ ಕಿಶೋರ್ ಮತ್ತು ಅನಿಲ್ ಮಿಶ್ರಾ ಡಾಕ್ಟರ್ ಅಂಬೇಡ್ಕರ್ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಈ ಇಬ್ಬರು ವಕೀಲರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸರ್ವಾನುಮತದಿಂದ ವಿವಿಧ ದಲಿತ ಸಂಘಟನೆಗಳು ಆಗ್ರಹಿಸಿವೆ.