ದಾವಣಗೆರೆ: ನಗರದಲ್ಲಿ ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿ; ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ
ಭಾನುವಾರ ದಾವಣಗೆರೆ ಹೊರವಲಯದ ಜಿನ್ನೆಸಿಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ರಸ್ತೆಯಲ್ಲಿ ಬಿದ್ದಿದ್ದ ಬೈಕ್ ಸವಾರನೊಬ್ಬನನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಮಾನವೀಯತೆ ಮೆರೆದಿದ್ದಾರೆ. ದಾವಣಗೆರೆ ಹೊರವಲಯದ ಜಿನ್ನೆಸಿಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದಾವಣಗೆರೆ ತಾಲ್ಲೂಕಿನ ಅಮೃತ ನಗರದ ಮಂಜು ಎಂಬ ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿತ್ತು.