ನಗರದ ಕರ್ನಾಟಕ ಫಾರ್ಮಸಿ ಕಾಲೇಜ್ ಆವರಣದಲ್ಲಿ 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಡೊಳ್ಳು ಬಾರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಂ ಖಾನ್ ಚಾಲನೆ ನೀಡಿದರು. ಸಮ್ಮೇಳನಾಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಅವರು ಇದ್ದ ಸಾರೋಟದ ಭವ್ಯ ಮೆರವಣಿಗೆ ಜರುಗಿತು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು. ಕಲಾತಂಡಗಳು ಮೆರವಣಿಗೆಗೆ ವಿಶೇಷ ಮೆರಗು ನೀಡಿದವು. ಗಣ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.