ಹೊಸನಗರ: ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅಗತ್ಯ, ರಿಪ್ಪನ್ ಪೇಟೆಯಲ್ಲಿ ಯಲ್ಲಿ ಶಾಸಕ ಆರಗ ಜ್ಞಾನೇಂದ್ರ
ಮಕ್ಕಳಿಗೆ ಶಿಕ್ಷಣದ ಜೊತೆಗೆ ಸುಸಂಸ್ಕೃತರನ್ನಾಗಿ ಮಾಡುವ ಮೂಲಕ ಸನ್ಮಾರ್ಗದಲ್ಲಿ ಸಾಗಲು ಶಿಕ್ಷಕರು ಬೋಧನೆ ಮಾಡಬೇಕೆಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಆವರಣದಲ್ಲಿ ಹಿರಿಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಆಯೋಜಿಸಲಾದ ಅಮೃತ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಹಾಗೂ ಶಾಲಾ ಪುನರ್ಮಿಲನ ಮತ್ತು ಶಿಕ್ಷಕರ ಸಮಾಗಮ ಕಾರ್ಯಕ್ರಮ ಭಾನುವಾರ ಸಂಜೆ 4 ಗಂಟೆಗೆ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ವ್ಯಕ್ತಿತ್ವ ನಿರ್ಮಾಣದೊಂದಿಗೆ ವ್ಯಕ್ತಿ ನಿರ್ಮಾಣ ಮಾಡುತ್ತದೆ. ನೌಕರಿಗಾಗಿ ಶಿಕ್ಷಣವಾಗದೆ ಬದುಕಿಗೆ ಮಾರ್ಗದರ್ಶನವಾಗಬೇಕು ಎಂದರು