ಶಿವಮೊಗ್ಗ: ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆ ಶಿವಮೊಗ್ಗದಲ್ಲಿ ಮರಣೋತ್ತರ ಪರೀಕ್ಷೆ
ಮಾಜಿ ಸಚಿವ ಬಿ ಸಿ ಪಾಟೀಲ್ ಅವರ ಅಳಿಯ ವಿಶೇಷ ಸೇವಿಸಿ ಆತ್ಮಹತ್ಯೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ. ಸೋಮವಾರ ಹಿರೇಕೆರೂರಿನಿಂದ ಶಿವಮೊಗ್ಗ ಕ್ಷೇತ್ರದ ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ 42 ವರ್ಷದ ಕೆ ಜಿ ಪ್ರತಾಪ್ ಕುಮಾರ್ ಹೊನ್ನಾಳಿ ಸಮೀಪದ ಅರಕೆರೆ ಗ್ರಾಮದ ಬಳಿ ರಸ್ತೆ ಬದಿ ಕಾರು ನಿಲ್ಲಿಸಿ ಕಾರಿನಲ್ಲಿ ವಿಷ ಸೇವಿಸಿ ಅಸ್ವಸ್ಥರಾಗಿದ್ದರು ಅವರನ್ನು ಕಂಡಂತವರು ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರತಾಪ್ ಕುಮಾರ್ ಮೃತಪಟ್ಟಿದ್ದಾರೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಗಾರದ ಸಮೀಪ ಮಾಜಿ ಸಚಿವ ಬಿಸಿ ಪಾಟೀಲ್ ಸಂಸದ ಬಿ ವೈ ರಾಘವೇಂದ್ರ ಸೇರಿದಂತೆ ಹಲವರು ದೌಡು.