ಯಲ್ಲಾಪುರ: ಸಂಸ್ಥೆಯನ್ನು ಹುಟ್ಟುಹಾಕುವುದು ಮುಖ್ಯವಲ್ಲ ಆ ಸಂಸ್ಥೆಯನ್ನು ಯಾವ ರೀತಿಯಲ್ಲಿ ಬೆಳೆಸುತ್ತೇವೆ ಎಂಬುದು ಮುಖ್ಯವಾಗುತ್ತದೆ :ಶಾಸಕ ಹೆಬ್ಬಾರ
ಯಲ್ಲಾಪುರ: ಒಂದು ಸಂಸ್ಥೆಯನ್ನು ಹುಟ್ಟುಹಾಕುವುದು ಮುಖ್ಯವಲ್ಲ ಆ ಸಂಸ್ಥೆಯನ್ನು ಯಾವ ರೀತಿಯಲ್ಲಿ ಬೆಳೆಸುತ್ತೇವೆ ಅನ್ನುವುದು ಮುಖ್ಯವಾಗುತ್ತದೆ. ಸಾಕಷ್ಟು ಸವಾಲುಗಳನ್ನು ಎದುರಿಸಿಯೂ ಸಹ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಂತಹ ಶಿಕ್ಷಣವನ್ನು ವಿಶ್ವದರ್ಶನ ಶಿಕ್ಷಣ ಸಮೂಹ ನೀಡುತ್ತಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು. ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಮೂಹದ ಆವರಣದಲ್ಲಿ ಆಯೋಜಿಸಿದ್ದ ವಿಶ್ವದರ್ಶನ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.