ಶಿರಸಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭ
ಶಿರಸಿ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಸಾಲಿನ ಪದಾಧಿಕಾರಿಗಳ ಆಯ್ಕೆಗೆ ನಡೆಯುತ್ತಿರುವ ಚುನಾವಣೆಯ ಮತದಾನ ಪ್ರಕ್ರಿಯೆಯು ಇಂದು ಭಾನುವಾರ ಬೆಳಿಗ್ಗೆ 9 ಗಂಟೆಗೆ ಶಿರಸಿ ನಗರದಲ್ಲಿರುವ ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಗಿದೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಸಾಲಿನ ಪದಾಧಿಕಾರಿಗಳ ಪೈಕಿ ಬಹುತೇಕ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗೆ ಇಂದು ಮತದಾನ ನಡೆಯುತ್ತಿದೆ. ಅಧ್ಯಕ್ಷ ಹುದ್ದೆಗೆ ಇಬ್ಬರು ಅಭ್ಯರ್ಥಿಗಳು ಸ್ಪರ್ಧಾಕಣದಲ್ಲಿದ್ದು, ಮೂರು ಉಪಾಧ್ಯಕ್ಷ ಹುದ್ದೆಗೆ ನಾಲ್ವರು ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ.