Install App
Login
HOME
Delhi
Haryana
Uttar Pradesh
Bihar
Chhattisgarh
Madhya Pradesh
Rajasthan
Jharkhand
Himachal Pradesh
Uttarakhand
Punjab
Andhra Pradesh
Telangana
Tamil Nadu
Karnataka
Maharashtra
Assam
West Bengal
Tripura
Gujarat
Odisha
Kerala
Jansamasya
News
पुलिस
Bjp
National
Bihar
बिहार
India
कांग्रेस
चोरी
बीजेपी
Congress
Modi
Delhi
Viral
Up
मध्यप्रदेश
अमित_शाह
Bollywood
Breakingnews
Madhya_pradesh
उत्तरप्रदेश
Pmmodi
Rahulgandhi
कानपुर
Uttarpradesh
Haryana
तेजस्वी_यादव
Sambalpur
Crimenews
mdrafiq790
ಯಾದಗಿರಿ || ಏನಿದು ರಾಜಾ… ಏನಿದು ರಾಜಾ… ಧೂಳಿನ ನಗರಿ… ಧೂಳಿನ ನಗರಿ! ಅಭಿವೃದ್ಧಿ ಹೆಸರಿನಲ್ಲಿ ಧೂಳಿನ ದರ್ಬಾರ್! ರಸ್ತೆಯಲ್ಲಿ ಓಡಾಡುವುದೋ, ಧೂಳಿನಲ್ಲಿ ಮುಳುಗುವುದೋ?
Yadgir, Yadgir
| Nov 7, 2026
MORE NEWS
ಕೊನೆಗೂ ಮುಹೂರ್ತ ಇಟ್ಟ ನಗರಸಭೆ. ಹೆಚ್ಚಿನ ಮಾಹಿತಿಗಾಗಿ ಕಾಮೆಂಟ್ ಬಾಕ್ಸ್ ನಲ್ಲಿ ಲಿಂಕ್ ಇದೆ ಕ್ಲಿಕ್ ಮಾಡಿ
Yadgir, Yadgir | Nov 7, 2026
ಹೆಚ್ಚಿನ ಮಾಹಿತಿಗಾಗಿ ಲಿಂಕನ್ನು ಕ್ಲಿಕ್ ಮಾಡಿ https://www.facebook.com/share/p/19szMBhNvb/
Yadgir, Yadgir | Nov 7, 2026
ಮಹಿಳೆಯರ ಸುರಕ್ಷತೆಗೆ ಅಕ್ಕಪಡೆ ಕಾರ್ಯಾಚರಣೆ ಪರಿಣಾಮಕಾರಿಯಾಗಿ ವಿಸ್ತರಿಸಿ:ಸಚಿವ ಸಂತೋಷ ಲಾಡ್ ಧಾರವಾಡ ನ.07: ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಅಕ್ಕಪಡೆ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಪರಿಣಾಮಕಾರಿಯಾಗಿ ವಿಸ್ತರಿಸಬೇಕು ಎಂದು ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು. ಅವರು ಇಂದು (ನ.08) ಬೆಳಿಗ್ಗೆ ಜೆ.ಎಸ್.ಎಸ್. ಕಾಲೇಜಿನ ಕದಂಬ ಕ್ರೀಡಾಂಗಣದಲ್ಲಿ ಬೆಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೆÇಲೀಸ್ ಇಲಾಖೆ ಹಾಗೂ ಗೃಹರಕ್ಷಕ ದಳ ಇವರ ಸಹಯೋಗದಲ್ಲಿ ಅಕ್ಕ ಪಡೆ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಗೃಹ ರಕ್ಷಕಿಯರ "ತೀವ್ರ ಸ್ವ-ರಕ್ಷಣೆ ಪ್ರದರ್ಶನ” ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. ಶಾಲಾ-ಕಾಲೇಜುಗಳಲ್ಲಿ ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿನಿಯರಲ್ಲಿ ಆತ್ಮವಿಶ್ವಾಸ ಮತ್ತು ಸುರಕ್ಷತೆಯ ಅರಿವು ಮೂಡಿಸಬೇಕು. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂದಿನ ಸಚಿವರಾಗಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಕ್ಕಪಡೆ ಪರಿಕಲ್ಪನೆಯನ್ನು ರೂಪಿಸಿರುವುದು ಅಭಿನಂದನೀಯ. ಈ ಕಾರ್ಯಕ್ರಮ ಇಂದು ಯಶಸ್ವಿಯಾಗಿ ಮುನ್ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ಅವರು ಹೇಳಿದರು. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಮಾಜದಲ್ಲಿ ಸುರಕ್ಷಿತ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮಹಿಳೆಯರ ರಕ್ಷಣೆ ಹಾಗೂ ದೌರ್ಜನ್ಯ ತಡೆಗಟ್ಟುವ ಕಾರ್ಯದಲ್ಲಿ ಮಹಿಳಾ ಗೃಹರಕ್ಷಕರ ಪಾತ್ರ ಮಹತ್ವದ್ದಾಗಿದೆ. ಮಹಿಳೆಯರು ಯಾವುದೇ ಭಯವಿಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುವಂತಾಗಬೇಕು. ಮಹಿಳೆಯರ ಸುರಕ್ಷತೆಗಾಗಿ ಜಾಗೃತಿ ಮೂಡಿಸುವುದರ ಜೊತೆಗೆ, ಸಂಕಷ್ಟದಲ್ಲಿರುವ ಮಹಿಳೆಯರಿಗೆ ಸೂಕ್ತ ನೆರವು ಮತ್ತು ರಕ್ಷಣೆ ಒದಗಿಸಬೇಕು. ಈ ನಿಟ್ಟಿನಲ್ಲಿ ಮಹಿಳಾ ಗೃಹರಕ್ಷಕರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು. ಮಹಿಳೆಯರ ಗೌರವ, ಸ್ವಾಭಿಮಾನ ಹಾಗೂ ಸುರಕ್ಷತೆಯನ್ನು ಕಾಪಾಡಲು ಪೆÇಲೀಸ್ ಇಲಾಖೆ ಮತ್ತು ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ ಎಂದರು. ಹುಬ್ಬಳ್ಳಿ-ಧಾರವಾಡ ಪೆÇಲೀಸ್ ಆಯುಕ್ತ ಬೊರಸೆ ಭೂಷಣ್ ಗುಲಾಬರಾವ್ ಅವರು ಮಾತನಾಡಿ, ರಾಜ್ಯದಲ್ಲಿ ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಫೆಬ್ರವರಿ ತಿಂಗಳಿನಿಂದ ಅಕ್ಕಪಡೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. ಈ ಕಾರ್ಯಕ್ರಮದ ಮೂಲಕ ರಾಜ್ಯದಲ್ಲಿ ಹಲವು ಬಾಲ್ಯವಿವಾಹಗಳನ್ನು ತಡೆಗಟ್ಟಲು ಸಾಧ್ಯವಾಗಿದೆ. ಮಹಿಳೆಯರ ಸುರಕ್ಷತೆ ಇಂದಿಗೂ ಸಮಾಜದ ಮುಂದಿರುವ ಬಹುದೊಡ್ಡ ಸವಾಲಾಗಿದೆ. ಸುಮಾರು ಒಂದು ದಶಕದ ಹಿಂದೆ ದೇಶದಲ್ಲಿ ನಡೆದ ನಿರ್ಭಯಾ ಪ್ರಕರಣ ಮಹಿಳೆಯರ ಸುರಕ್ಷತೆಯ ಕುರಿತು ದೇಶದ ಗಮನ ಸೆಳೆದಿತ್ತು. ಆದರೂ ಮಹಿಳೆಯರಿಗೆ ಸಂಪೂರ್ಣ ಸುರಕ್ಷತೆ ಕಲ್ಪಿಸುವ ನಿಟ್ಟಿನಲ್ಲಿ ಇನ್ನೂ ಸಾಕಷ್ಟು ಕಾರ್ಯಗಳು ನಡೆಯಬೇಕಿವೆ. ಸ್ವಾತಂತ್ರ್ಯ ದೊರೆತು ಎಂಟು ದಶಕಗಳು ಕಳೆದರೂ ಮಹಿಳೆಯರ ಭದ್ರತೆ ಮತ್ತು ಸುರಕ್ಷತೆಯ ಸಮಸ್ಯೆ ಮುಂದುವರಿದಿರುವುದು ಆತಂಕಕಾರಿ ಸಂಗತಿಯಾಗಿದೆ. ವಿದೇಶಗಳಿಂದ ಭಾರತಕ್ಕೆ ಆಗಮಿಸುವ ಮಹಿಳೆಯರಿಗೂ ಸುರಕ್ಷತೆಯ ಕುರಿತು ಎಚ್ಚರಿಕೆ ನೀಡುವ ಪರಿಸ್ಥಿತಿ ಇಂದಿಗೂ ಇದೆ ಎಂದು ಅವರು ಹೇಳಿದರು. ಮಹಿಳೆಯರು ಹಾಗೂ ಮಕ್ಕಳಿಗೆ ಯಾವುದೇ ರೀತಿಯ ತೊಂದರೆ, ಅಸಭ್ಯ ವರ್ತನೆ ಅಥವಾ ಸುರಕ್ಷತೆಗೆ ಧಕ್ಕೆ ಉಂಟಾದಲ್ಲಿ ತಕ್ಷಣ ಸಹಾಯವಾಣಿ ಸಂಖ್ಯೆ 1098 ಕ್ಕೆ ಕರೆ ಮಾಡಬೇಕು. ಮನೆಯವರು, ಅಕ್ಕಪಕ್ಕದವರು ಅಥವಾ ಶಾಲಾ ಪರಿಸರದಲ್ಲಿ ಯಾವುದೇ ರೀತಿಯ ಕಿರುಕುಳ ಅಥವಾ ಕೆಟ್ಟ ವರ್ತನೆ ಎದುರಾದರೂ ದೂರು ನೀಡಬಹುದು. ಅದೇ ರೀತಿ ತುರ್ತು ಸಂದರ್ಭದಲ್ಲಿ 112 ಸಂಖ್ಯೆಗೆ ಕರೆ ಮಾಡಿದರೆ, 10 ನಿಮಿಷದೊಳಗೆ ಪೆÇಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅಗತ್ಯ ನೆರವು ನೀಡುವರು ಎಂದು ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಹಾಗೂ ಇಂಟರ್ನೆಟ್ ಬಳಕೆ ಹೆಚ್ಚಾಗುತ್ತಿರುವುದರಿಂದ ಸೈಬರ್ ಅಪರಾಧಗಳ ಅಪಾಯವೂ ಹೆಚ್ಚುತ್ತಿದೆ. ವಿಶೇಷವಾಗಿ ಹೆಣ್ಣುಮಕ್ಕಳ ವೈಯಕ್ತಿಕ ಫೆÇೀಟೋಗಳನ್ನು ದುರುಪಯೋಗಪಡಿಸಿಕೊಳ್ಳುವುದು, ಅವುಗಳನ್ನು ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡುವುದು ಸೇರಿದಂತೆ ಹಲವು ಪ್ರಕರಣಗಳು ವರದಿಯಾಗುತ್ತಿವೆ. ಸೈಬರ್ ಕ್ರೈಂ ಪೆÇಲೀಸ್ ಠಾಣೆಗೆ ಪ್ರತಿ ತಿಂಗಳು ಎರಡರಿಂದ ಮೂರು ದೂರುಗಳು ಬರುತ್ತಿವೆ. ಆದ್ದರಿಂದ ಹೆಣ್ಣುಮಕ್ಕಳು ತಮ್ಮ ವೈಯಕ್ತಿಕ ಫೆÇೀಟೋಗಳನ್ನು ಯಾವುದೇ ಕಾರಣಕ್ಕೂ ಇತರರೊಂದಿಗೆ ಹಂಚಿಕೊಳ್ಳಬಾರದು. ಸಾಮಾಜಿಕ ಜಾಲತಾಣ ಹಾಗೂ ಇಂಟರ್ನೆಟ್ ಬಳಕೆಯಲ್ಲಿ ಎಚ್ಚರಿಕೆ ವಹಿಸಬೇಕು. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಕಾಪಾಡುವಲ್ಲಿ ಪ್ರತಿಯೊಬ್ಬರೂ ಜಾಗೃತರಾಗಿರಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅಕ್ಕ ಪಡೆ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಗೃಹ ರಕ್ಷಕಿಯರ ತೀವ್ರ ಸಂರಕ್ಷಣೆ ಕುರಿತು ಶಕ್ತಿ ಪ್ರದರ್ಶನ ನಡೆಸಿದರು. ಅಕ್ಕಪಡೆ ಮುಖ್ಯ ತರಬೇತಿದಾರ ಶಿವರಾಮ್ ರಾಠೋಡ, ಸಹ ತರಬೇತಿದಾರ ದೀಪಕ ರಾಠೋಡ ಅವರು ತರಬೇತಿ ಪ್ರದರ್ಶನ ನಡೆಸಿದರು. ಅಕ್ಕಾ ಪಡೆ ರಾಜ್ಯ ಸಲಹೆಗಾರರು ಡಾ. ಶೈನಿ ರಾಜೇಂದ್ರಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಹುಬ್ಬಳ್ಳಿ ಧಾರವಾಡ ಶಹರ ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಶಿಲ್ಪಾ.ಜಿ.ಉಳ್ಳಿಕಾಶಿ ಅವರು ನಿರೂಪಿಸಿ, ವಂದಿಸಿದರು. ವೇದಿಕೆಯಲ್ಲಿ ಜಿಲ್ಲಾಧಿಕಾರಿ ಸ್ನೇಹಲ್. ಆರ್., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಕೆ.ಎಸ್.ಪಿ.ಎಸ್ ಪೆÇಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲ ಮತ್ತು ಪೆÇಲೀಸ್ ಅಧೀಕ್ಷಕ ಎಮ್.ಎಮ್.ಯಾದವಾಡ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಉಮೇಶ ಬೊಮ್ಮಕ್ಕನವರ, ಜನತಾ ಶಿಕ್ಷಣ ಸಮಿತಿ ಕಾರ್ಯದರ್ಶಿ ಡಾ.ಅಜೀತ ಪ್ರಸಾದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವಿಜಯಲಕ್ಷ್ಮೀ ಪಾಟೀಲ, ಜಿಲ್ಲಾ ನಿರೂಪಣಾಧಿಕಾರಿ ಡಾ. ಕಮಲಾ ಬೈಲೂರ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅಕ್ಕ ಪಡೆ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಗೃಹರಕ್ಷಿಕಿಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಶಿಕ್ಷಕರು ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ***
Yadgir, Yadgir | Nov 7, 2026
I got over 30,000 reactions on my posts last week! Thanks everyone for your support! 🎉
Yadgir, Yadgir | Nov 7, 2026
ನಾಗಮಂಗಲದಲ್ಲಿ ಶ್ರೀ ಕೋಟೆ ವಿದ್ಯಾ ಗಣಪತಿ ವಿಸರ್ಜನಾ ಕಾರ್ಯಕ್ರಮ ಶಾಂತಿಯುತವಾಗಿ ಸಂಪನ್ನ ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ಶೋಭಾರಾಣಿ ವಿ.ಜೆ. ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಾಗಮಂಗಲ: ಪಟ್ಟಣದಲ್ಲಿ ನವೆಂಬರ್ 6ರಂದು ಆಯೋಜಿಸಲಾಗಿದ್ದ ಶ್ರೀ ಕೋಟೆ ವಿದ್ಯಾ ಗಣಪತಿ ವಿಸರ್ಜನಾ ಕಾರ್ಯಕ್ರಮವು ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಶಾಂತಿಯುತವಾಗಿ ನೆರವೇರಿತು. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಶೋಭಾರಾಣಿ ವಿ.ಜೆ., ಐಪಿಎಸ್ ಅವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭದ್ರತಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ವಿಸರ್ಜನಾ ಕಾರ್ಯಕ್ರಮವನ್ನು ಸುಗಮವಾಗಿ ನಡೆಸಲು ಪೊಲೀಸ್ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿತ್ತು. ಜಿಲ್ಲಾ ಪೊಲೀಸ್ ಇಲಾಖೆಯ ಮುನ್ನೆಚ್ಚರಿಕೆ ಹಾಗೂ ಸೂಕ್ತ ಭದ್ರತಾ ವ್ಯವಸ್ಥೆಯಿಂದಾಗಿ ಕಾರ್ಯಕ್ರಮವು ಯಾವುದೇ ಅಹಿತಕರ ಘಟನೆಗಳಿಲ್ಲದೆ ಶಾಂತಿಯುತವಾಗಿ ಸಂಪನ್ನಗೊಂಡಿತು.
Yadgir, Yadgir | Nov 7, 2026
ಸೇವಾ ಕವಾಯತ್ತಿನಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದ ಪೊಲೀಸ್ ಆಯುಕ್ತರು! ಬೆಂಗಳೂರು: ಸೇವಾ ಕವಾಯತ್ತಿನ ಪರೇಡ್ನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಪೊಲೀಸ್ ಅಧಿಕಾರಿಗಳಿಗೆ ಮಾನ್ಯ ಪೊಲೀಸ್ ಆಯುಕ್ತರಾದ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರು ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ. ಸೇವಾ ಕವಾಯತ್ತಿನ ಸಂದರ್ಭದಲ್ಲಿ ಶಿಸ್ತು, ಕರ್ತವ್ಯನಿಷ್ಠೆ ಹಾಗೂ ಉತ್ತಮ ಕಾರ್ಯನಿರ್ವಹಣೆ ತೋರಿದ ಪೊಲೀಸ್ ಅಧಿಕಾರಿಗಳನ್ನು ಗುರುತಿಸಿ, ಪೊಲೀಸ್ ಆಯುಕ್ತರು ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು. ಪೊಲೀಸ್ ಸಿಬ್ಬಂದಿಯ ಕರ್ತವ್ಯನಿಷ್ಠೆ ಮತ್ತು ಉತ್ತಮ ಕಾರ್ಯಕ್ಷಮತೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಗೌರವ ನೀಡಲಾಗಿದೆ. ಇಂತಹ ಪ್ರೋತ್ಸಾಹವು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಮತ್ತಷ್ಟು ಉತ್ಸಾಹ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಲು ಪ್ರೇರಣೆಯಾಗಲಿದೆ. ಉತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳನ್ನು ಗುರುತಿಸಿ ಗೌರವಿಸಿದ ಪೊಲೀಸ್ ಆಯುಕ್ತರ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. #KarnatakaStatePolice #PoliceCommissioner #IPS #PoliceAppreciation #ServiceParade #PoliceDepartment #PoliceNews #karnatakapolice1
Yadgir, Yadgir | Nov 6, 2026
ತುಮಟಿ ಗ್ರಾಮದಲ್ಲಿ ಐಸಿಎಆರ್-ಐಐಎಸ್ಡಬ್ಲೂö್ಯಸಿ ವತಿಯಿಂದ ‘ಕ್ಷೇತ್ರ ಬಚಾವೋ ಅಭಿಯಾನ’ ಬಳ್ಳಾರಿ,ನ.06 : ಸಮಗ್ರ ಪೋಷಕಾಂಶ ನಿರ್ವಹಣೆ, ಮಣ್ಣಿನ ಫಲವತ್ತತೆ ರಕ್ಷಣೆ ಹಾಗೂ ಸುಸ್ಥಿರ ಕೃಷಿ ಪದ್ಧತಿಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ, ಭಾರತೀಯ ಮಣ್ಣು ಮತ್ತು ಜಲ ಸಂರಕ್ಷಣಾ ಸಂಸ್ಥೆಯ ಬಳ್ಳಾರಿ ಸಂಶೋಧನಾ ಕೇಂದ್ರದ ವತಿಯಿಂದ ಸಂಡೂರು ತಾಲೂಕಿನ ತುಮಟಿ ಗ್ರಾಮದಲ್ಲಿ ಶುಕ್ರವಾರ ‘ಕ್ಷೇತ್ರ ಬಚಾವೋ ಅಭಿಯಾನ’ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ರೈತರನ್ನುದ್ದೇಶಿಸಿ ಮಾತನಾಡಿದ ಸಂಸ್ಥೆಯ ಹಿರಿಯ ಕೃಷಿ ಅರ್ಥಶಾಸ್ತç ವಿಜ್ಞಾನಿ ಡಾ. ರವಿ ದುಪ್ದಲ್, ಪರಿಸರಸ್ನೇಹಿ ಕೃಷಿ, ಬೆಳೆ ವೈವಿಧ್ಯೀಕರಣ ಹಾಗೂ ಪೋಷಕಾಂಶಗಳ ಸಮರ್ಪಕ ಚಕ್ರ ನಿರ್ವಹಣೆಯು ಮಳೆಯಾಶ್ರಿತ ಕೃಷಿಯ ಸುಸ್ಥಿರತೆಗೆ ಅನಿವಾರ್ಯ. ರೈತರು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಪಿಎಂ-ಕಿಸಾನ್, ಕಿಸಾನ್ ಕ್ರೆಡಿಟ್ ಕಾರ್ಡ್ ಹಾಗೂ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮುಂತಾದ ಸರ್ಕಾರಿ ಯೋಜನೆಗಳ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಆದಾಯ ವೃದ್ಧಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಮಣ್ಣು ವಿಜ್ಞಾನಿ ಡಾ. ಕವಿತಾ ಪಿ. ಜಾಧವ್ ಅವರು ಸಮಗ್ರ ಪೋಷಕಾಂಶ ನಿರ್ವಹಣೆ ಕುರಿತು ತಾಂತ್ರಿಕ ಮಾಹಿತಿ ನೀಡಿ, ರೈಜೋಬಿಯಂ, ಅಜೋಸ್ಪಿರಿಲ್ಲಂ, ಟ್ರೆöÊಕೋಡರ್ಮಾ ಮತ್ತು ರಂಜಕ ಕರಗಿಸುವ ಬ್ಯಾಕ್ಟೀರಿಯಾಗಳಂತಹ ಜೈವಿಕ ಪರಿಕರಗಳು ಮಣ್ಣಿನಿಂದ ಹರಡುವ ರೋಗಗಳನ್ನು ನಿಯಂತ್ರಿಸಿ, ಪೋಷಕಾಂಶಗಳ ಲಭ್ಯತೆಯನ್ನು ಹೆಚ್ಚಿಸುತ್ತವೆ ಎಂದು ತಿಳಿಸಿದರು. ಸಾವಯವ ಇಂಗಾಲದ ವೃದ್ಧಿಗೆ ಹಸಿರೆಲೆ ಗೊಬ್ಬರ ಮತ್ತು ಸಾವಯವ ಗೊಬ್ಬರಗಳ ಬಳಕೆ ಅಗತ್ಯ. ರೈತರು ಕಡ್ಡಾಯವಾಗಿ ಕಾಲಕಾಲಕ್ಕೆ ಮಣ್ಣು ಪರೀಕ್ಷೆ ಮಾಡಿಸಿ, ಶಿಫಾರಸು ಮಾಡಿದ ಪ್ರಮಾಣದಲ್ಲಿಯೇ ಪೋಷಕಾಂಶಗಳನ್ನು ಪೂರೈಸಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದ ಭಾಗವಾಗಿ ವಿಜ್ಞಾನಿಗಳು ರೈತರಿಗೆ ವೈಜ್ಞಾನಿಕವಾಗಿ ಮಣ್ಣಿನ ಮಾದರಿ ಸಂಗ್ರಹಿಸುವ ವಿಧಾನಗಳ ಕುರಿತು ಸ್ಥಳದಲ್ಲೇ ಪ್ರಾಯೋಗಿಕ ತರಬೇತಿ ನೀಡಿದರು. ರೈತರು ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿ ತಮ್ಮ ಬೆಳೆ, ಪೋಷಕಾಂಶ ನಿರ್ವಹಣೆ ಹಾಗೂ ಮಣ್ಣು-ನೀರು ಸಂರಕ್ಷಣೆಗೆ ಸಂಬAಧಿಸಿದ ಸಂದೇಹಗಳನ್ನು ಪರಿಹರಿಸಿಕೊಂಡರು. ಗ್ರಾಮದ ರೈತರು ಹಾಗೂ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ---------
Yadgir, Yadgir | Nov 6, 2026
YADGIR NEWS || BREAKING NEWS 🚨 #ಯಾದಗಿರಿ ನಗರದ ರೈಲ್ವೆ ಬ್ರಿಡ್ಜ್ನಲ್ಲಿ ಭಾರೀ ಟ್ರಾಫಿಕ್ ಜಾಮ್! ಹಳೆ ಬಸ್ ನಿಲ್ದಾಣದಿಂದ ಶಹಾಪುರ ಕಡೆಗೆ ತೆರಳುವ ರೈಲ್ವೆ ಬ್ರಿಡ್ಜ್ನಲ್ಲಿ ವಾಹನಗಳ ದಟ್ಟಣೆ ಉಂಟಾಗಿ ಸಂಚಾರ ಅಸ್ತವ್ಯಸ್ತವಾಗಿದೆ. ವಾಹನ ಸವಾರರು ಟ್ರಾಫಿಕ್ ಜಾಮ್ನಿಂದ ಪರದಾಡುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಪರ್ಯಾಯ ಟೈಟಲ್ಗಳು: ಹಳೆ ಬಸ್ ನಿಲ್ದಾಣದ ರೈಲ್ವೆ ಬ್ರಿಡ್ಜ್ನಲ್ಲಿ ಟ್ರಾಫಿಕ್ ಜಾಮ್! ಯಾದಗಿರಿಯಲ್ಲಿ ವಾಹನ ಸವಾರರ ಪರದಾಟ! ರೈಲ್ವೆ ಬ್ರಿಡ್ಜ್ನಲ್ಲಿ ವಾಹನಗಳ ಸಾಲುಸಾಲು – ಸಂಚಾರಕ್ಕೆ ಅಡಚಣೆ! ಹಳೆ ಬಸ್ ನಿಲ್ದಾಣದಿಂದ ಶಹಾಪುರ ಮಾರ್ಗದಲ್ಲಿ ವಾಹನ ದಟ್ಟಣೆ! #YadgirNews #Yadgir #BreakingNews #TrafficJam #YadgirTraffic #RailwayBridge #ಯಾದಗಿರಿ #ಟ್ರಾಫಿಕ್_ಜಾಮ್ #ವಾಹನಸಂಚಾರ #PublicIssue @topfans
Yadgir, Yadgir | Nov 6, 2026