ಮಡಿಕೇರಿ: ಕೊಡಗು: ಹೋಟೆಲ್, ಬೇಕರಿಗಳ ಮೇಲೆ ದಾಳಿ, ಹಲವರಿಗೆ ನೋಟಿಸ್
ಕೊಡಗು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ಗೋಣಿಕೊಪ್ಪ ಹಾಗೂ ಕುಶಾಲನಗರದ ಹೋಟೆಲ್ ಮತ್ತು ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ ನಡೆಸಿದೆ. ದೂರುಗಳ ಆಧಾರದ ಮೇಲೆ ನೋಟಿಸ್ ಜಾರಿ ಮಾಡಲಾಗಿದ್ದು, ಆಹಾರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಸ್ವಚ್ಛತೆ ಮತ್ತು ಆಹಾರ ಸುರಕ್ಷತಾ ನಿಯಮ ಪಾಲಿಸುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.