ಗೋವಿನ ಜೋಳ ಮತ್ತು ಹತ್ತಿ ಖರೀದಿ ಕೇಂದ್ರ ಆರಂಭಿಸಲು ಆಗ್ರಹಿಸಿ ವಿವಿಧ ರೈತ ಪರ ಸಂಘಟನೆಗಳ ನೇತೃತ್ವದಲ್ಲಿ ಕುಂದಗೋಳ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು. ಸೋಮವಾರ ಮಧ್ಯಾಹ್ನ 3 ಗಂಟೆಗೆ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಗುಣಮಟ್ಟದ ನೆಪದಲ್ಲಿ ಖರೀದಿ ಕೇಂದ್ರದಲ್ಲಿ ತಿರಸ್ಕರಿಸಿದ ಹೆಸರು ಮತ್ತು ಉದ್ದು ಬೆಳೆಗಳನ್ನು ಪುನಃ ಖರೀದಿ ಮಾಡುಬೇಕು ಎಂದು ಆಗ್ರಹಿಸಿದರು.