ಚಿಕ್ಕೋಡಿ: ಪಟ್ಟಣದಲ್ಲಿ ಯಶಸ್ವಿಯಾಗಿ ಜರುಗಿದ ಯುವ ಕಾಂಗ್ರೆಸ್ ಸಮ್ಮೇಳನ
ಪಟ್ಟಣದಲ್ಲಿ ಯಶಸ್ವಿಯಾಗಿ ಜರುಗಿದ ಯುವ ಕಾಂಗ್ರೆಸ್ ಸಮ್ಮೇಳನ. ಚಿಕ್ಕೋಡಿ ಪಟ್ಟಣದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯು ಆಯೋಜಿಸಿದ್ದ ಯುವ ಸಮ್ಮೇಳನ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಮಂಗಳವಾರ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥಗೌಡ ಅವರು ಉದ್ಘಾಟನೆ ಗೊಳಿಸಿ ಮಾತನಾಡಿದರು. ಕೇಂದ್ರದ ಬಿಜೆಪಿ ಸರ್ಕಾರವು ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ಇದರ ವಿರುದ್ಧ ರಾಜ್ಯದ ಒಬ್ಬನೇ ಒಬ್ಬ ಬಿಜೆಪಿ ಸಂಸದ ಧ್ವನಿ ಎತ್ತುತ್ತಿಲ್ಲ. ಕನ್ನಡಿಗರನ್ನು ದ್ವೇಷದಿಂದ ನೋಡುವ ಕೇಂದ್ರಕ್ಕೆ ತಕ್ಕ ಪಾಠ ಕಲಿಸಬೇಕಿದೆ ಎಂದು ಹೇಳಿದರು